ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ , ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ಆಶ್ರಯದಲ್ಲಿ ಮಂಗಳೂರು ವಿವಿ ವ್ಯಾಪ್ತಿಯ ಗ್ರೇಸಿ ಮಚಡೊ ಸ್ಮಾರಕ ಅಂತರ್ ಕಾಲೇಜು ಮಹಿಳೆಯರ ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು, ಮೂಡಬಿದಿರೆ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು, ತೃತೀಯ ಸ್ಥಾನ ಎಸ್.ಡಿ. ಎಂ. ಕಾಲೇಜು, ಉಜಿರೆ, ಚತುರ್ಥ ಸ್ಥಾನವನ್ನು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪಡೆಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕರಾದ ರತ್ನಾಕರ್ ಪುತಿ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕರಾದ ಸಂದೀಪ್ ದೇವಾಡಿಗ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್., ಕಾಲೇಜಿನ ಕ್ರೀಡಾ ಕಾರ್ಯದರ್ಶಿ ನಿತಿನ್ ಉಪಸ್ಥಿತರಿದ್ದರು.
ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.