ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕ್ರೀಡಾ ಸಾಧನೆ ಮಾಡಬಯಸುವ ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪ್ರಯತ್ನ ಮತ್ತು ಕಾರ್ಯ ಚತುರತೆಯನ್ನು ಮೈಗೂಡಿಸಿಕೊಳ್ಳುವುದು ಅತೀ ಅಗತ್ಯ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಸಮಾಜಮುಖಿ ಬದುಕನ್ನು ರೂಪಿಸಿಕೊಳ್ಳಿ ಎಂದು ಸಿಟಿ ಕೌನ್ಸಿಲ್ ಕಾರ್ಪೋರೇಷನ್ ಉಡುಪಿಯ ಮುನ್ಸಿಪಲ್ ಕಮಿಷನರ್‍ರಾದ ಡಾ| ಕೆ. ಉದಯ ಶೆಟ್ಟಿ ಹೇಳಿದರು.
ಕಾಲೇಜಿನ ಕ್ರೀಡಾ ಸಾಧನೆಗೆ ಆಡಳಿತ ಮಂಡಳಿ ಸಹಕಾರ ಸ್ತುತ್ಯಾರ್ಹ. ಸೋಲು-ಗೆಲುವಿನ ಪ್ರಶ್ನೆ ಮುಖ್ಯವಲ್ಲ. ಕ್ರೀಡೆ ದೈಹಿಕ ಮತ್ತು ಮಾನಸಿಕ ಸದೃಡತೆಗೆ ಸಹಕಾರಿ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್., ವಾಣಿಜ್ಯ ಉಪನ್ಯಾಸಕರಾದ ರಕ್ಷಿತ್ ರಾವ್ ಗುಜ್ಜಾಡಿ, ಯೋಗೀಶ್ ಶಾನುಭೋಗ್, ಕ್ರೀಡಾ ಕಾರ್ಯದರ್ಶಿ ನಿತಿನ್ ಪೂಜಾರಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.