ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜ್ ಮತ್ತು ಸ್ಕೂಲ್‍ – ಶಿಕ್ಷಕರ ದಿನಾಚರಣೆ

0
474

ಸಮಾಜಕ್ಕೆ ನೆರಳು ಕೊಡುವ ಹೆಮ್ಮೆಯ ವಿದ್ಯಾಸಂಸ್ಥೆ ಕುಂದಾಪುರ ಎಕ್ಸಲೆಂಟ್ ಕಾಲೇಜು ಮತ್ತು ಸ್ಕೂಲ್ – ಪ್ರೋ. ಎಂ. ಬಾಲಕೃಷ್ಣ ಶೆಟ್ಟಿ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಗುರು ಪರಂಪರೆಯಲ್ಲಿ ಗುರುವು ಒಳ್ಳೆಯ ಶಿಷ್ಯನನ್ನು ಪಡೆದಾಗ ಮಾತ್ರ ಶಿಕ್ಷಕ ಧನ್ಯನಾಗುತ್ತಾನೆ. ಸಮಾಜದಲ್ಲಿ ಗುರುವಿಗೆ ಮನ್ನಣೆಯಿದ್ದು, ಶಿಕ್ಷಕರು ತಾಯಿಗಿಂತ ಶ್ರೇಷ್ಠರು. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಸಮಾಜ ಕಟ್ಟುವ ದೇಗುಲವಿದ್ದಂತೆ ಎಂದು ಮಂಗಳೂರಿನ ರಾಮಕೃಷ್ಣ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ಪ್ರೋ. ಎಂ. ಬಾಲಕೃಷ್ಣ ಶೆಟ್ಟಿ ಹೇಳಿದರು.

ಅವರು ಸೆ. 5 ರಂದು ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜ್ ಮತ್ತು ಸ್ಕೂಲ್‍ನ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ. ಸರ್ವಪಳ್ಳಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಇದೇ ಸಂದರ್ಭ ಮಂಗಳೂರಿನ ರಾಮಕೃಷ್ಣ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ಪ್ರೋ. ಎಂ. ಬಾಲಕೃಷ್ಣ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ, ಗುರುವಂದನೆ ಸಲ್ಲಿಸಿದರು.

Click Here

Click Here

ವಿದ್ಯಾರ್ಥಿಗಳ ಸಾಧನೆಗೆ ಶ್ರಮಿಸಿದ ಸಾಧಕ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಯಿತು.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ, ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರು ಡಾ. ರಮೇಶ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವನೆಗೈದರು. ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಸಮ್ಮಾನಿತರ ಪಟ್ಟಿ ವಾಚಿಸಿ, ಪ್ರಕಾಶ್ ಆಚಾರ್ಯ ನಿರೂಪಿಸಿ, ವಂದಿಸಿದರು.

Click Here

LEAVE A REPLY

Please enter your comment!
Please enter your name here