ಕುಂದಾಪುರ ಮಿರರ್ ಸುದ್ದಿ….
ಕುಂದಾಪುರ: ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ ಅಧಿಕಾರಿಯಾಗಿ ಡಾ. ಸನ್ಮಾನ್ ಶೆಟ್ಟಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಾ.ಸನ್ಮಾನ್ ಶೆಟ್ಟಿ ಹಿಂದೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಇತ್ತೀಚೆಗೆ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಸೇವೆಗೆ ನಿಯುಕ್ತಿಗೊಂಡಿದ್ದರು. ಮುಖ್ಯಮಂತ್ರಿಗಳ ಆದೇಶ ಮೇರೆಗೆ ಆಯ್ಕೆ ನಡೆದಿದ್ದು, ಸರ್ಕಾರೀ ನೌಕರರ ಸಂಘದ ವತಿಯಿಂದ ನೂತನವಾಗಿ ಅಧಿಕಾರ ಸ್ವೀಕರಿಸಿದ ಡಾ. ಸನ್ಮಾನ್ ಶೆಟ್ಟಿಯವರನ್ನು ಅಭಿನಂಧಿಸಲಾಯಿತು.
ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ್ ದಿನಕರ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರಿ ಸಂಘದ ಉಪಾಧ್ಯಕ್ಷ ಪ್ರಕಾಶಚಂದ್ರ ಶೆಟ್ಟಿ, ಡಾ. ನಾಗೇಶ್, ಡಾ.ಮಹೇಂದ್ರ ಶೆಟ್ಟಿ, ಡಾ.ಶಿವಕುಮಾರ್, ಶಿವಾನಂದ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.