ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ವಾರಾಹಿ ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ!

0
1846

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದೆನೆಂದು ಬೇಸರಗೊಂಡ ವಿದ್ಯಾರ್ಥಿಯೊಬ್ಬ ಮನನೊಂದು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಯಾನೆ‌ ನಿಕ್ಕಿ ಎಂದು ಗುರುತಿಸಲಾಗಿದೆ.

Click Here

Click Here

ಸಾಯೀಶ್ ಶೆಟ್ಟಿ ಶಿವಮೊಗ್ಗದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು ನೀಟ್ ಪರೀಕ್ಷೆ ಬರೆದಿದ್ದ. 630 ಅಂಕ ಪಡೆಯುವ ಭರವಸೆ ಇಟ್ಟುಕೊಂಡಿದ್ದ. ಅದರ ಫಲಿತಾಂಶಕ್ಕಾಗಿ ಕಾಯುತ್ತಿದ್ದ. ಇದೀಗ ಫಲಿತಾಂಶ ಬಂದಿದ್ದು, ಇಂದು ಬೆಳಿಗ್ಗೆ ಸೈಕಲ್ ತೆಗೆದುಕೊಂಡು ಸೈಬರ್ ಹೋಗಿ ಪರೀಕ್ಷಿಸಿದ್ದಾನೆ. ಆಗ 140 ಅಂಕ ಬಂದಿದ್ದು ತಿಳಿದು ಕಡಿಮೆ ಅಂಕ ಬಂತೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಹಂತದಲ್ಲಿ ತಿಳಿದುಬಂದಿದೆ.

ಸಾಯೀಶ್ ಶೆಟ್ಟಿ ಸಂಗಂ ಬ್ರಿಡ್ಜ್ ಬಳಿ ಸೈಕಲ್ಲಿನಲ್ಲಿ ಬಂದಿದ್ದು, ಸೈಕಲ್‌ ಹಾಗೂ ಮೊಬೈಲನ್ನು ಬಗರಿಡ್ಜ್ ಪಕ್ಕ ಇಡುತ್ತಿದ್ದಾಗ ಸ್ಥಳೀಯರು ಕೆಲವರು ನೋಡಿದ್ದಾರೆ. ಆದರೆ ಆತ ಏನು ಮಾಡುತ್ತಿದ್ದಾನೆ ಎನ್ನುವುದನ್ನು ಗ್ರಹಿಸುವ ಮೊದಲೇ ಅವರ ಕಣ್ಣೆದುರೇ ನದಿಗೆ ಹಾರಿದ್ದಾನೆ.

ಇದೀಗ ಪೊಲೀಸರು, ಮುಳುಗು ತಜ್ಞರು ಹಾಗೂ ಸ್ಥಳೀಯರು ವಿದ್ಯಾರ್ಥಿಯ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ನೀರಿನ ಹರಿವು ಹೆಚ್ಚಿದ್ದು, ನೀರಿನ ಮಟ್ಟವೂ ಹೆಚ್ಚಾಗಿರುವ ಕಾರಣ ಆತನನ್ನು ಪತ್ತೆ ಹಚ್ಚಲು ಕಷ್ಟವಾಗುತ್ತಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click Here

LEAVE A REPLY

Please enter your comment!
Please enter your name here