ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದಲ್ಲಿ ಶರನ್ನವರಾತ್ರಿ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ದೇವಳದಲ್ಲಿ ನಡೆಯಿತು.
ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್ ,ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಂ.ಸುಬ್ರಾಯ ಆಚಾರ್ಯ,ಜಿ ಸತೀಶ್ ಹೆಗ್ಡೆ,ಚಂದ್ರ ಪೂಜಾರಿ,ರಾಮದೇವ ಐತಾಳ್,ಸುಂದರ್ ಕಾರ್ಕಡ,ಸುಶೀಲ ಸೋಮಶೇಖರ್ ದೇವಳದ ಮ್ಯಾನೇಜರ್ ಗಣೇಶ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.