ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಚೇತನ ಪ್ರೌಢಶಾಲೆ ಹಂಗಾರಕಟ್ಟೆ ಬ್ರಹ್ಮಾವರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಆಯ್ಕೆ ಪಂದ್ಯಾಟದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಂದಾಪುರ ಇದರ ಪ್ರೌಢಶಾಲಾ ವಿಭಾಗದ ಅನಿಕೇತ್ ಹಾಗೂ ತೇಜಸ್ ಆಯ್ಕೆಯಾಗಿದ್ದಾರೆ.
ಇವರು ಹಾಸನದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಉದಯ ಮಡಿವಾಳ ಎಂ . ಮಾರ್ಗದರ್ಶನ ನೀಡುತ್ತಿದ್ದಾರೆ.