ಕುಂದಾಪುರ ಮಿರರ್ ಸುದ್ದಿ…
ಕೋಟ :ಶ್ರೀವಿನಾಯಕ ಯುವಕ ಮಂಡಲ ಸಾೈಬ್ರಕಟ್ಟೆ-ಯಡ್ತಾಡಿ ಅವರು ಕೊಡಮಾಡುವ 2022ನೇ ಸಾಲಿನ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರವನ್ನು ಸಮಾಜ ಸೇವಕ ರವಿ ಕಟಪಾಡಿ ಆಯ್ಕೆಯಾಗಿದ್ದಾರೆ.
ಕೃಷ್ಣ ಜನ್ಮಾಷ್ಟಮಿಯಂದು ವೈವಿಧ್ಯಮಯ ವೇಷ ತೊಟ್ಟು ಸಂಗ್ರಹವಾದ ಹಣದಿಂದ ಅನಾರೋಗ್ಯ ಪೀಡಿತ ಮಕ್ಕಳ ವೈದ್ಯಕೀಯ ನೆರವು ನೀಡುವುದರ ಜೊತೆಗೆ ಹಲವಾರು ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ನಿಸ್ವಾರ್ಥ ಮನೋಭಾವದಿಂದ ರವಿ ಕಟಪಾಡಿ ನಿರ್ವಹಿಸುತ್ತಿರುವುದು ಗಮನಾರ್ಹವಾಗಿದೆ ಅಲ್ಲದೆ ಅಶಕ್ತರ ಬಾಳಿಗೆ ಹೊಸ ಬದುಕು ಇತರ ಯುವ ಸಮೂಹಕ್ಕೆ ಪ್ರೇರಣೆಯಾಗಿದ್ದಾರೆ. ಅವರ ಈ ಸೇವೆಯನ್ನು ಗುರುತಿಸಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ದೇವಾಡಿಗ ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಅಕ್ಟೋಬರ್ 2 ರಂದು ಸಾೈಬ್ರಕಟ್ಟೆಯ ಮಹಾತ್ಮ ಗಾಂಧಿ ಫ್ರೌಡಶಾಲೆಯಲ್ಲಿ ನಡೆಯುವ 11 ನೇ ವರ್ಷದ ಶ್ರೀ ಶಾರದ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದೆಂದು ಯುವಕ ಮಂಡಲದ ಕಾರ್ಯದರ್ಶಿ ಪ್ರಭಾಕರ್ ಪೂಜಾರಿ ಅವರು ತಿಳಿಸಿದರು.