ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲೆ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ಸೋಲು ಗೆಲುವನ್ನು ಸಮಪ್ರಮಾಣದಲ್ಲಿ ಸ್ವೀಕರಿಸಿದಾಗ ಅದು ಕ್ರೀಡಾ ಮನೋಭಾವನೆ ಎನಿಸಿಕೊಳ್ಳುತ್ತದೆ. ಕ್ರೀಡಾ ಮನೋಭಾವನೆಯನ್ನು ಎಲ್ಲ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಲ್ಲ ವಲಯದ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಘುನಾಥ್, ಎಸ್ ಡಿ ಎಂ ಸಿ ಅಧ್ಯಕ್ಷ ಸತೀಶ್ ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಪ್ರಭಾಕರ್ ಜೈನ್, ತಾ. ಪ್ರಾ. ಶಾ. ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ, ಸರಕಾರಿ ಪ್ರೌಢ ಶಾಲಾ ಗ್ರೇಡ್ 1 ದೈ. ಶಿ. ಶಿ. ಸಂಘದ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಕುಂದಾಪುರ ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈ.ಶಿ. ಶಿ. ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಆರ್ ಎನ್ ಶೆಟ್ಟಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ಪ್ರಾಂಶುಪಾಲ ರಾಮಕೃಷ್ಣ ಬಿ ಜಿ, ಹಳೆವಿದ್ಯಾರ್ಥಿ ಸಂಘದ ಸದಸ್ಯ ಅನಂತಕೃಷ್ಣ ಕೊಡ್ಗಿ, ಕುಂದೇಶ್ವರ ವ್ಯ. ಸೇ. ಸ. ಬ್ಯಾಂಕಿನ ಪ್ರಬಂಧಕ ನರಸಿಂಹ ಹೊಳ್ಳ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಎಲ್ಲಾ ವಿಭಾಗದ ಬಹುಮಾನಗಳ ದಾನಿಗಳಾದ ಕೈಲಾಡಿ ಮೇಲ್ಮನೆ ಗಾನವಿ ಎಂಟರ್ ಪ್ರೈಸಸ್ ಮಾಲಕ ನಾಗರಾಜ್ ಶೆಟ್ಟಿ ಬಹುಮಾನ ವಿತರಿಸಿದರು. ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
14 ರ ಬಾಲಕರ ವಿಭಾಗದಲ್ಲಿ ಕಾರ್ಕಳ ವಲಯ ಪ್ರಥಮ, ಬೈಂದೂರು ವಲಯ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಬೈಂದೂರು ವಲಯ ಪ್ರಥಮ ಹಾಗೂ ಕಾರ್ಕಳ ವಲಯ ದ್ವಿತೀಯ ಸ್ಥಾನ ಪಡೆದರು. 17 ರ ಬಾಲಕಿಯರ ವಿಭಾಗದಲ್ಲಿ ಬೈಂದೂರು ವಲಯ ಪ್ರಥಮ, ಉಡುಪಿ ವಲಯ ದ್ವಿತೀಯ ಹಾಗೂ ಬಾಲಕರ ವಿಭಾಗದಲ್ಲಿ ಉಡುಪಿ ವಲಯ ಪ್ರಥಮ ಹಾಗೂ ಕುಂದಾಪುರ ವಲಯ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡವು.
ಗಣೇಶ್ ಕಾಂಚನ್ ಹಾಗೂ ಉದಯ ಮಡಿವಾಳ ಎಂ ನಿರೂಪಿಸಿದರು. ಉಪಪ್ರಾಂಶುಪಾಲ ಕಿರಣ್ ಹೆಗ್ಡೆ ಸ್ವಾಗತಿಸಿದರು. ಪ್ರಕಾಶ್ಚಂದ್ರ ಶೆಟ್ಟಿ ವಂದಿಸಿದರು