ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಇಂದು ಭಾರತೀಯ ಜನಸಂಘ ಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿಯ ಪ್ರಯುಕ್ತ ಪಕ್ಷದ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟ ಅವರ ಜೀವನ, ಅವರ ತ್ಯಾಗ ಬಲಿದಾನ, ಪಕ್ಷದ ಕಾರ್ಯಕರ್ತರಿಗೆ ಅವರು ಹಾಕಿಕೊಟ್ಟ ದಾರಿ, ಆದರ್ಶವನ್ನು ಸ್ಮರಿಸಿಕೊಳ್ಳುವುದರ ಮೂಲಕ ಅವರ ಜಯಂತಿಯನ್ನು ಆಚರಿಸಲಾಯಿತು.
ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಕಾರ್ಯದರ್ಶಿ ಆಶಾಲತಾ ನಾಯ್ಕ್, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಪೂಜಾರಿ, ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ, ಶೇಖರ್ ಕುಂಚಾರುಬೆಟ್ಟು, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೌರಭಿ ಪೈ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯ ಸಂತೋಷ್ ಹಂಗಳೂರು, ಹಿರಿಯ ಮುಖಂಡರಾದ ಶೇಖರ್ ಕೈಪಾಡಿ, ರಮೇಶ್ ಚಿಕ್ಕನ್ ಸಾಲ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.