ಕುಂದಾಪುರ ಮಿರರ್ ಸುದ್ದಿ…
ಕೊಲ್ಲೂರು : ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬೆಳಗ್ಗೆ 8:30 ಗಂಟೆಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದರು.
Video:
9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ದೇವಳ ಸಕಲ ಸಿದ್ಧತೆ ಮಾಡಿಕೊಂಡಿದ್ದು ಊರ- ಪರವೂರಿನಿಂದ ಭಕ್ತರಿಗೋಸ್ಕರ ವಿಶೇಷ ಸೌಕರ್ಯ ಒದಗಿಸಲಾಗಿದೆ. ಸಂಜೆ 6 ಗಂಟೆಗೆ ನವರಾತ್ರಿಯ ಕಲಶ ಪ್ರತಿಷ್ಠಾಪಿಸಲಾಗುತ್ತದೆ. ಪ್ರತಿದಿನ ನಡೆಯುವ ಸಾಂಸ್ಕೃತಿಕ ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿಕೊಂಡರು. ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ. ಮಹೇಶ್, ದೇವಳದ ಪ್ರಧಾನ ತಂತ್ರಿಗಳಾದ ಡಾ. ರಾಮಚಂದ್ರ ಅಡಿಗ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಜಯಾನಂದ ಹೋಬಳಿದಾರ್, ಡಾ. ಅತುಲ್ ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಗಣೇಶ್ ಕಿಣಿ, ಸಂಧ್ಯಾ ರಮೇಶ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.