ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ ಸಮಯ ನಿರ್ವಹಣೆ, ನಾಯಕತ್ವ ಗುಣ ಹಾಗೂ ನೈತಿಕ ಮೌಲ್ಯಗಳನ್ನು ಎನ್.ಎಸ್.ಎಸ್. ಕ್ರಿಯಾ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಭಾಗವಹಿಸುವ ಮೂಲಕ ಪಡೆದುಕೊಳ್ಳಬಹುದು. ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಭವಿಷ್ಯದ ಬದುಕು ರೂಪಿಸಿಕೊಳ್ಳಲು ಸೂಕ್ತ ವೇದಿಕೆ ಎಂದರು.
ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಸಹ ಯೋಜನಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕರಾದ ಶಬರಿ ಪೂಜಾರಿ ಮತ್ತು ಸಾಕ್ಷಿ ರಾಷ್ಟ್ರೀಯ ಭಾವೈಕ್ಯತಾ ಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.