ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಪ್ರತೀ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಾ, ನಿರಂತರ ಕಲಿಕೆಗೆ ಬದುಕು ತೆರೆದುಕೊಳ್ಳಲಿ. ಕಲಿಕೆ ಬದುಕಿನ ಭಾಗವಾಗದೆ, ಕಲಿಕೆಯೇ ಬದುಕಾಗಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಬಿ.ಬಿ.ಎ. ವಿದ್ಯಾರ್ಥಿಗಳ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಶೈಕ್ಷಣಿಕ ವಿಚಾರಗಳ ಕುರಿತ ಮಾತುಗಳನ್ನಾಡಿದರು. ದ್ವಿತೀಯ ಬಿ.ಬಿ.ಎ. ವಿದ್ಯಾರ್ಥಿಗಳಾದ ತುಷಾರ್ ಮತ್ತು ಅಭಿಷೇಕ್ ಪ್ರಾರ್ಥನೆಗೈದರು. ತೃತೀಯ ಬಿ.ಬಿ.ಎ. ವಿದ್ಯಾರ್ಥಿಗಳಾದ ಜಾಕ್ಸನ್ ಕಾರ್ಯಕ್ರಮ ವಂದಿಸಿ, ಶೋಭಾ ಕಾರ್ಯಕ್ರಮ ನಿರೂಪಿಸಿದರು.