ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ತೆಕ್ಕಟ್ಟೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಗ್ರಾಮ ಅಧ್ಯಕ್ಷರಾದ ಮಮತಾ ದೇವಾಡಿಗ ಇವರು ಮಹಾತ್ಮಾ ಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ , ಲಾಲ್ ಬಹಾದ್ದೂರ್ ಶಾಸ್ತ್ರಿ ಇವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಮಾತನಾಡಿದ ಅವರು ಮಹಾತ್ಮ ಗಾಂಧಿಯವರು ಈ ದೇಶದ ಸ್ವಾತಂತ್ರ್ಯಕ್ಕಾಗಿ ಅಹಿಂಸಾತ್ಮಕ ಹೋರಾಟವನ್ನು ಸ್ಮರಿಸಿದರು ಮತ್ತು ಇಂದಿನ ಯುವ ಜನತೆ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಇವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸಂಜೀವ ದೇವಾಡಿಗ, ಸದಸ್ಯರಾದ ವಿಜಯ ಭಂಡಾರಿ, ಸುರೇಶ್ ಶೆಟ್ಟಿ , ಪ್ರತಿಮಾ, ದಲಿತ ಸಂಘಟನೆಯ ಸತೀಶ್ ಕುಮಾರ್ ತೆಕ್ಕಟ್ಟೆ, ಮಹೇಶ್ ತೆಕ್ಕಟ್ಟೆ, ರಮೇಶ್ ತೆಕ್ಕಟ್ಟೆ , ಪಂಚಾಯತ್ ಸಿಬ್ಬಂದಿಗಳಾದ ಭಾರತಿ ಶೆಟ್ಟಿ , ಆಶಾ, ಶ್ರೀನಿವಾಸ ಪೂಜಾರಿ, ಮಂಜುನಾಥ, ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಪಂಚಾಯತ್ ಕಾರ್ಯದರ್ಶಿ ಚಂದ್ರ ವಂದಿಸಿದರು.