ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪುರಸ್ಕೃತ ಗಣೇಶ ಶೆಟ್ಟಿಗಾರರಿಗೆ ಸನ್ಮಾನ.
ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಜನೆ ಮಾಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ನಿತ್ಯಾನಂದ ದೇವಾಡಿಗ ವಹಿಸಿದರು.
ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಕುರಿತು ಭಾಷಣ ನೆರವೇರಿಸಿದರು. 2021-22ನೆಯ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಿಶಾಳೊಂದಿಗೆ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 11 ವಿದ್ಯಾರ್ಥಿಗಳನ್ನು ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.
ಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಾಲಾ ಗಣಿತ ಶಿಕ್ಷಕರಾದ ಗಣೇಶ ಶೆಟ್ಟಿಗಾರ್ ರನ್ನು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಸ್ ಡಿ ಎಂ ಸಿ ಯವರ ಪರವಾಗಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗಣೇಶ ಶೆಟ್ಟಿಗಾರ್ ಈ ಪ್ರಶಸ್ತಿ ತಂದುಕೊಟ್ಟಿದ್ದು ವಿದ್ಯಾರ್ಥಿಗಳ ಉತ್ತಮ ಫಲಿತಾಂಶ, ಆದ್ದರಿಂದ ಪ್ರಶಸ್ತಿಯನ್ನು ಶಾಲಾ ವಿದ್ಯಾರ್ಥಿಗಳಿಗೆ ಅರ್ಪಿಸುತ್ತೇನೆ ಎಂದರು. ಪ್ರಶಸ್ತಿಯೊಂದಿಗೆ ಪಡೆದ ನಗದು ಪುರಸ್ಕಾರವನ್ನು ಶಾಲಾಭಿವೃದ್ಧಿಗೆ ಬಳಸಲು ಮುಖ್ಯೋಪಾಧ್ಯಾಯಿನಿಯವರಿಗೆ ಹಸ್ತಾಂತರಿಸಿದರು.
ಎಸ್ ಡಿ ಎಂ ಸಿ ಸದಸ್ಯೆ ಶ್ರೀಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗರವರು ಸ್ವಾಗತಿಸಿದರು. ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ದಿನೇಶ್ ಪ್ರಭು ವಂದಿಸಿದರು. ಮಕ್ಕಳಿಂದ ಶಾಲಾ ಪರಿಸರ ಸ್ವಚ್ಛಗೊಳಿಸಲಾಯಿತು.