ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಭ್ರಮದ ಶರನ್ನವರಾತ್ರಿ ಸಂಪನ್ನ

0
264

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೊಳಪಟ್ಟ ಶ್ರೀ ಕ್ಷೇತ್ರ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬುಧವಾರ ಸಂಭ್ರಮದ ಶರನ್ನವರಾತ್ರಿ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು.

Click Here

Click Here

ಪುಷ್ಪಪವಾಡ ಕ್ಷೇತ್ರವಾದ ತ್ರಿಶಕ್ತಿ ಸ್ವರೂಪಿಣಿ ಸೌಕೂರಿನ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದಲ್ಲಿ ಸೆಪ್ಟಂಬರ್ 26ರಿಂದ ಅಕ್ಟೋಬರ್ 4ರಂದು ಮಂಗಳವಾರದ ವರೆಗೆ ನಡೆದ ನವರಾತ್ರಿ ಕಾರ್ಯಕ್ರಮ ನಡೆಯಿತು. ವಿಜಯದಶಮಿಯ ದಿನವಾದ ಬುಧವಾರ ಮಧ್ಯಾಹ್ನ ಮಹಾನೈವೇದ್ಯ, ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

ಸಂಜೆ ದೇವಸ್ಥಾನದಲ್ಲಿ ಪುಷ್ಪರಥೋತ್ಸವ ಕಾರ್ಯಕ್ರಮ ನಡೆಯಿತು. ಸೌಕೂರು ದೇವಳದ ರಥಬೀದಿಯಲ್ಲಿ ಪುಷ್ಪರಥದಲ್ಲಿ ದೇವಿಯನ್ನು ಕುಳ್ಳಿರಿಸಿ ಭಕ್ತಾಭಿಮಾನಗಳು ಮೆರವಣಿಗೆ ನಡೆಸಿದರು. ಪ್ರಧಾನ ಅರ್ಚಕ ಅನಂತ ಅಡಿಗರು ದೇವರ ಕಾರ್ಯಗಳನ್ನು ಯಶಸ್ವಿಯಾಗಿ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಮಂಜಯ್ಯ ಶೆಟ್ಟಿ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ನೇತೃತ್ವ ವಹಿಸಿದ್ದರು. ಸಾವಿರಾರು ಭಕ್ತಾಧಿಗಳು ದೇವಿಯ ದರ್ಶನ ಪಡೆದು ಪುನೀತರಾದರು.

Click Here

LEAVE A REPLY

Please enter your comment!
Please enter your name here