ಎಕ್ಸಲೆಂಟ್ ಕುಂದಾಪುರ – ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆ

0
434

ಕುಂದಾಪುರ ಮಿರರ್ ಸುದ್ದಿ….

ಕುಂದಾಪುರ :2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಚದುರಂಗ ಪಂದ್ಯಾವಳಿಯು ಅಕ್ಟೋಬರ್ 7 ಮತ್ತು 8ರಂದು ಶ್ರೀ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಬಿಡದಿ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಾನಸ ದೇವಾಡಿಗ ಮತ್ತು ನಿಹಾಲ್ ಎನ್ ಶೆಟ್ಟಿ ಉಡುಪಿ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಹಾಗೂ ಚತುರ್ಥ ಸ್ಥಾನಿ ವಿಜೇತರಾಗಿ, ಓಡಿಸ್ಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹರಾಗಿರುತ್ತಾರೆ.

Click Here

ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ಮಾನಸ ದೇವಾಡಿಗ ಇವರು ಸತೀಶ್ ದೇವಾಡಿಗ ಮತ್ತು ಶೈಲಜಾ ದಂಪತಿಯ ಪುತ್ರಿಯಾಗಿರುತ್ತಾರೆ. ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ನಿಹಾಲ್ ಎನ್ ಶೆಟ್ಟಿ ಇವರು ನಾರಾಯಣ ಶೆಟ್ಟಿ ಮತ್ತು ಮಂಜುಳಾ ಶೆಟ್ಟಿ ದಂಪತಿಯ ಪುತ್ರನಾಗಿರುತ್ತಾರೆ. ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆಯನ್ನು ಮತ್ತು ವಿದ್ಯಾರ್ಥಿಗಳಿಗೆ ಬೆನ್ನೆಲುಬಾಗಿ ನಿಂತ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್ ಕುಮಾರ್ ಮತ್ತು ಜಯಲತಾ ಅವರಿಗೂ ಎಂ.ಎಂ ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರೀಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆಯವರು, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಚೇರ್‍ಮೆನ್ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿಯವರು, ಕಾರ್ಯದರ್ಶಿಯಾದ ಪ್ರತಾಪಚಂದ್ರ ಶೆಟ್ಟಿ ಹಾಗೂ ಕೋಶಾಧಿಕಾರಿಯಾದ ಭರತ್ ಶೆಟ್ಟಿಯವರು, ಮತ್ತು ಸಂಸ್ಥೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಯವರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ಅಭಿನಂಧಿಸಿ ರಾಷ್ಟ್ರಮಟ್ಟದಲ್ಲೂ ಯಶಸ್ವಿಗಳಿಸಲಿ ಎಂದು ಶುಭಹಾರೈಸಿದರು.

LEAVE A REPLY

Please enter your comment!
Please enter your name here