ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಹಾಗೂ ಅದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 138ನೇ ವಾರದ ಪರಿಸರಸ್ನೇಹಿ ಅಭಿಯಾನದ ಹಿನ್ನಲ್ಲೆಯಲ್ಲಿ ಯಕ್ಷಸೌರಭ ಕಲಾರಂಗ ಕೋಟ, ಹಂದಟ್ಟು ಮಹಿಳಾ ಬಳಗ ಕೋಟ,ಶಾಲಾ ಆಡಳಿತ ಮಂಡಳಿ, ಪೋಷಕ ವೃಂದ ಸಮ್ಮುಖದಲ್ಲಿ ಕೋಟ ಶಿವರಾಮ ಕಾರಂತರು ಕಲಿತ ಶಾಲೆ ಕೋಟ ಶಾಲೆ ಇಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಪುಷ್ಬಾವತಿ ಹೊಳ್ಳ,ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ, ಮಹಿಳಾಧ್ಯಕ್ಷೆ ಕಲಾವತಿ ಅಶೋಕ್, ಯಕ್ಷಸೌರಭ ಕಲಾರಂಗದ ಸತ್ಯನಾರಾಯಣ ಆಚಾರ್ಯ, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಪುಷ್ಭಾ ಪೂಜಾರಿ ಕೋಟ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಲಕ್ಷ್ಮೀ ಸೋಮಯಾಜಿ ಮತ್ತಿತರರು ಉಪಸ್ಥಿತರಿದ್ದರು.