ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕನ್ನಡ ವಿಭಾಗದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಅಂತರ್ ತರಗತಿ ಕನ್ನಡ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಯಿತು. ಬೇರೆ ಬೇರೆ ತರಗತಿಗಳನ್ನು ಪ್ರತಿನಿಧಿಸುವ 13 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ತೀರ್ಪುಗಾರರಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಮೊಗವೀರ್ ಗಂಗೊಳ್ಳಿ, ಗ್ರಂಥಪಾಲಕ ಮಹೇಶ್ ನಾಯ್ಕ್, ಹಿಂದಿ ಉಪನ್ಯಾಸಕಿ ಶ್ರೀಮತಿ ರೇವತಿ ಸಹಕರಿಸಿದರು.
ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ಸಹ ಯೋಜನಾಧಿಕಾರಿ ದೀಪಾ ಪೂಜಾರಿ ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಸುಕುಮಾರ ಶೆಟ್ಟಿ ಕಮಲಶಿಲೆ ಕಾರ್ಯಕ್ರಮ ಸಂಯೋಜಿಸಿದರು.