ಕುಂದಾಪುರ: ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಭ್ರಮದ ಗೋಪೂಜಾ ಉತ್ಸವ

0
171

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದಾಪುರ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕುಂದಾಪುರ ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಗೋಶಾಲೆಯಲ್ಲಿ ಗೋ ಪೂಜಾ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ದೀಪಾವಳಿಯ ಪ್ರಯುಕ್ತ ಪರಂಪರಾಗತವಾಗಿ ಆಚರಿಸಿಕೊಂಡು ಬಂದಿರುವ ಗೋ ಪೂಜಾ ಉತ್ಸವವನ್ನು ದೇವಸ್ಥಾನದ ಅರ್ಚಕರ ಮೂಲಕ ನೆರವೇರಿಸಲಾಯಿತು.

Click Here

ಪೇಟೆ ಶ್ರೀ ವೆಂಕಟರಮಣ ದೇವರಿಗೆ ಪೂಜೆ ಸಲ್ಲಿಸಿ ನಂತರದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾದ ರಾಧಾಕೃಷ್ಣ ಶೆಣೈ ಮತ್ತು ಮಂಡಳಿಯ ಸದಸ್ಯರ ಉಪಸ್ಥಿತಿಯಲ್ಲಿ ದೇವಸ್ಥಾನದ ಅರ್ಚಕರಿಂದ ನೆರವೇರಿತು. ಪೂಜಾ ಸಂದರ್ಭ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸೌರಭಿ ಪೈ ಮತ್ತು ಜಯಲಕ್ಷ್ಮೀ ಗಾಣಿಗ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ಆಶಾಲತಾ ನಾಯ್ಕ್, ಮಹಿಳಾ ಮೋರ್ಚಾ ಕಾರ್ಯದರ್ಶಿಗಳಾದ ರೋಹಿಣಿ ಪೈ, ನೇತ್ರಾವತಿ, ಶಾಂತಾ ಗೋಪಾಲಕೃಷ್ಣ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯೆ ಪುಷ್ಪಾ ಶೇಟ್, ಮಂಡಲ ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here