ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾದ ವತಿಯಿಂದ ಕುಂಭಾಶಿಯ ಮಕ್ಕಳ ಮನೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಷರ್ಧೆಗಳನ್ನ ಆಯೋಜಿಸಿ ಬಹುಮಾನ ವಿತರಿಸಲಾಯಿತು. ಕನ್ನಡ ರಾಜ್ಯೋತ್ಸವದ ಆಚರಣೆಯ ಅಂಗವಾಗಿ ರಾಷ್ಟ್ರಕವಿ ಕುವೆಂಪು ಅವರ’ ಜೈ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ’ ಎಂಬ ಕನ್ನಡ ನಾಡಗೀತೆಯ ಸಾರಾಂಶವನ್ನು ತಿಳಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರದ ಅಧ್ಯಕ್ಷೆ ಸರಸ್ವತಿ ಗಣೇಶ್ ಪುತ್ರನ್ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಕುಂದಾಪುರ ಶ್ರೇಯೋಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಕೆ ಅವರು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಲಯನ್ಸ್ ಸದಸ್ಯರು ಗಳಾದ ಆಶಾಲತಾ ಶೆಟ್ಟಿ, ಚಂದ್ರಿಕಾ ಧನ್ಯ ಹಾಗೂ ಮಕ್ಕಳ ಮನೆಯ ಮೇಲ್ವಿಚಾರಕಿ ವಿನುತಾ ಅವರು ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಜಯಶೀಲ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಕಲ್ಪನಾ ಭಾಸ್ಕರ್ ವಂದಿಸಿದರು.