ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಗಳಾದ ಯತೀಶ್ ಶೆಟ್ಟಿ ಮತ್ತು ಸಿರಿಕಾ ಇವರು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ಅಕ್ಷರ್ ಎನ್ ಶೆಟ್ಟಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿಗಳನ್ನು ಎಂ.ಎಂ ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರೀಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪಚಂದ್ರ ಶೆಟ್ಟಿ, ಖಜಾಂಚಿಯಾದ ಭರತ್ ಶೆಟ್ಟಿ ಹಾಗೂ ಎಕ್ಸಲೆಂಟ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ ಆಚಾರ್ಯ ಮತ್ತು ಶಿಕ್ಷಕ – ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.