ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ಪ್ರೌಢಶಾಲಾ ವಿಭಾಗದ(ಬೋರ್ಡ್ ಹೈ ಸ್ಕೂಲ್) ತೇಜಸ್ ಆರ್ ನಾಯ್ಕ ಮತ್ತು ಅನಿಕೇತ್ ಇವರು ಹಾಸನ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ತೇಜಸ್ ಆರ್ ನಾಯ್ಕ ಇಡೀ ಪಂದ್ಯಾಟದಲ್ಲಿ ಬೆಸ್ಟ ಬೌಲರ್ ಪ್ರಶಸ್ತಿಯನ್ನು ಕೂಡ ಪಡೆದಿರುತ್ತಾನೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದು ಸಂಸ್ಥೆಯ ಉಪರಾಂಶಪಾಲರಾದ ಕಿರಣ್ ಹೆಗ್ಡೆ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ