ಕುಂದಾಪುರ ಮಿರರ್ ಸುದ್ದಿ…
ಕೋಟ: ಮಂದಾರ್ತಿ ದುರ್ಗಾ ಪರಮೇಶ್ವರಿ ಪ್ರೌಢ ಶಾಲೆಯಲ್ಲಿ ನಡೆದ ಬ್ರಹ್ಮಾವರ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢ ಶಾಲೆ ಗುಂಡ್ಮಿ-ಸಾಸ್ತಾನ ಇಲ್ಲಿನ ವಿದ್ಯಾರ್ಥಿಗಳು ಒಟ್ಟು 6 ಚಿನ್ನದ ಪದಕ, 1 ಬೆಳ್ಳಿಯ ಪದಕ,ಹಾಗೂ 2 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಶಾಲೆಯ ಇತಿಹಾಸದಲ್ಲೇ ಪ್ರಪ್ರಥಮವಾಗಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.
17 ರ ವಯೋಮಾನದಲ್ಲಿ ಸಮರ್ಥ 400 ಮೀಟರ್ ಓಟ ಪ್ರಥಮ, ಎತ್ತರ ಜಿಗಿತ ಪ್ರಥಮ,ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಗಳಿಸಿರುತ್ತಾನೆ. ಸುಜನ 800 ಮೀಟರ್ ಪ್ರಥಮ, 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದರೆ, ಅಮಿತ ನಡಿಗೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ 14 ರ ವಯೋಮಾನದ ಬಾಲಕರಲ್ಲಿ ಫೈಝಾನ್ 100 ಮೀಟರ್ ಪ್ರಥಮ, 200 ಮೀಟರ್ ಪ್ರಥಮ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.