ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿ ಛಲ, ಗುರಿ, ಆಕಾಂಕ್ಷೆ ಹಾಗೂ ಕೌಶಲ್ಯಗಳೊಂದಿಗೆ ಮುಂದೆ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಿವೃತ್ತ ಕನ್ನಡ ಉಪನ್ಯಾಸಕ ಡಾ. ಶ್ರೀಕಾಂತ್ ರಾವ್ ಸಿದ್ಧಾಪುರ ಹೇಳಿದರು.
ಅವರು ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಇದೇ ಸಂದರ್ಭ ಕೊರೋನಾ ಮಹಾಮಾರಿಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ವ್ಯತ್ಯಯ ಉಂಟಾದ ಕಾರಣ 2019- 20, 2020 -21ರ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಸಾಧನೆಗೈದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗದ ಕಾರಣ ಪ್ರಸಕ್ತ ವರ್ಷದ ವಾರ್ಷಿಕೋತ್ಸವದ ಬಹುಮಾನ ವಿತರಣಾ ಸಮಾರಂಭದಲ್ಲಿ 2021- 22 ರ ಸಾಲಿನ ವಿದ್ಯಾರ್ಥಿಗಳು ಸೇರಿ 393 ವಿದ್ಯಾರ್ಥಿಗಳಿಗೆ ಬೆಳ್ಳಿ ನಾಣ್ಯ ನೀಡಿ ಗೌರವಿಸಲಾಯಿತು.
ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ರಾಗಿಣಿ, ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾ ನುಭೋಗ್ , ವೆಂಕಟರಮಣ ಸಮೂಹ ಸಂಸ್ಥೆಗಳ ಮುಖ್ಯ ಶಿಕ್ಷಕ ಕೃಷ್ಣ ಅಡಿಗ , ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾದ್ಯಾಯಿನಿಯರಾದ ರೇಷ್ಮಾ ಡಿಸೋಜಾ, ಪ್ರಮೀಳಾ ಡಿಸೋಜಾ, ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಐಶ್ವರ್ಯ. ಡಿ.ರಾವ್ ಅತಿಥಿಯನ್ನು ಪರಿಚಯಿಸಿ,ವೀಕ್ಷಾ ಸ್ವಾಗತಿಸಿ, ಸನತ್ ಶೆಟ್ಟಿ ವಂದಿಸಿ, ನೇಹಾ ಎನ್. ರಾವ್ ಕಾರ್ಯಕ್ರಮ ನಿರೂಪಿಸಿದರು.