ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ 20ನೇ ಮಾಲಿಕೆ ಡಿ.2ರಂದು ಸಂಜೆ 4.ಗ ಸ್ವಗೃಹದಲ್ಲಿ ಜಿ ತಿಮ್ಮ ಪೂಜಾರಿಯವರನ್ನು ಗೌರವಿಸಲಿದ್ದೇವೆ. ಸಹಕಾರ ಕ್ಷೇತ್ರದ ಸಾಧನೆ ,ಕೃಷಿ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದು, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷರಾಗಿ ನಿರಂತರ ಸೇವೆ ಹಾಗೂ ಸಾಧನೆಗಾಗಿ ಈ ಗೌರವ ನೀಡಲಿದ್ದೇವೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.