ರೈತರೆಡೆಗೆ ನಮ್ಮ ನಡಿಗೆ – ಸಹಕಾರಿ, ಕೃಷಿ ಕ್ಷೇತ್ರದ ಸಾಧಕ ಜಿ.ತಿಮ್ಮ ಪೂಜಾರಿ ಅವರಿಗೆ ಸನ್ಮಾನ

0
185

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಸಂಘಟನೆಯ ರೈತಪರ ಹಾಗೂ ಪರಿಸರ ಪ್ರಜ್ಞೆ ಶ್ಲಾಘನೀಯ ಎಂದು ಕೋಟ ಅಮೃತೇಶ್ವರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು.

ಡಿ.2ರಂದು ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ 20ನೇ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ಒಂದು ಸಂಸ್ಥೆಯಾಗಿ ರೈತಾಪಿ ವರ್ಗಕ್ಕೆ ಚೈತನ್ಯ ತುಂಬುವುದರ ಜೊತೆಗೆ ಕೃಷಿ ಸಂಸ್ಕಾರಕ್ಕೆ ಉತ್ತೇಜನ ನೀಡುತ್ತಿದೆ. ಇದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಸಂಘ ಸಂಸ್ಥೆಗಳ ಕ್ರೀಯಾಶೀಲತೆಯನ್ನು ಇಂತಹ ಕಾರ್ಯಕ್ರಮಗಳು ವೇದಿಕೆಯಾಗಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಸಹರಕಾರ ಕ್ಷೇತ್ರದ ಸಾಧಕ , ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಜಿ ತಿಮ್ಮ ಪೂಜಾರಿ ಇವರನ್ನು ಕೋಟ ಅಮೃತೇಶ್ವರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ ಕುಂದರ್ ಕೃಷಿ ಪರಿಕರಗಳನ್ನು ನೀಡಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿದ ಜಿ ತಿಮ್ಮ ಪೂಜಾರಿ ರೈತರಿಗೆ ಸಹಕಾರಿ ಸಂಘಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ಸಹಕಾರಿ ಸಂಘ ರೈತರ ನೋವು ನಲಿವುಗಳಿಗೆ ಸದಾ ಸ್ಪಂದಿಸುವ ಕಾರ್ಯ ಮಾಡುತ್ತಿದೆ. ಇದಕ್ಕೆ ಇತ್ತೀಚಿಗೆ ಹಮ್ಮಿಕೊಂಡ ಹಲವು ಕಾರ್ಯಕ್ರಮಗಳೇ ಸಾಕ್ಷಿ ಎಂದರಲ್ಲದೆ, ಸಂಘ ಸಂಸ್ಥೆಗಳು ರೈತಪರ ಕಾರ್ಯಕ್ರಮಗಳ ಮೂಲಕ ಕೃಷಿ ಕ್ಷೇತ್ರಕ್ಕೆ ತನ್ನದೆ ಆದ ಕೊಡುಗೆ ನೀಡುತ್ತಿದೆ ಇದೊಂದು ಅವಿಸ್ಮರಣೀಯ ದಿನಗಳಲ್ಲಿ ಸೇರಿದೆ ಎಂದು ಸಂತಸ ವ್ಯಕ್ತಪಡಿಸಿದರು.

Click Here

ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಹಾಗೂ ಕೃಷಿಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಯೋಜನಾಧಿಕಾರಿ ರವೀಂದ್ರ ಮೊಗವೀರ ನೀಡಿದರು.

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣೂರು ಭಾಸ್ಕರ್ ಶೆಟ್ಟಿ, ಕೋಟ ಸಿ ಎ ಬ್ಯಾಂಕ್ ನಿರ್ದೇಶಕ ಟಿ.ಮಂಜುನಾಥ ಗಿಳಿಯಾರು, ಕೋಟ ಸಿ ಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ವ್ಯವಸ್ಥಾಪಕ ಕುಮಾರ್ ಕೋಟ, ರೈತಧ್ವನಿಸಂಘ ಕೋಟ ಅಧ್ಯಕ್ಷ ಎಂ.ಜಯರಾಮ್ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ್ ಹೊಳ್ಳ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಅರುಣ್ ಕುಂದರ್, ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ರಾಜ್ಯ ಅಮೇಚೂರ್ ಕಬಡ್ಡಿ ಅಸೋಸಿಯೇಷನ್‍ನ ರಾಜೇಂದ್ರ ಸುವರ್ಣ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ ,ಯಕ್ಷಸೌರಭ ಕಲಾರಂಗದ ಸತ್ಯನಾರಾಯಣ ಆಚಾರ್ಯ, ಹಂದಟ್ಟು ಮಹಿಳಾ ಬಳಗದ ಶಕೀಲ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು.

ಪಂಚವರ್ಣದ ಸಂಚಾಲಕ ಅಜಿತ್ ಆಚಾರ್ಯ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಸುಜಾತ ಬಾಯರಿ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು. ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಪೂಜಾರಿ ಸನ್ಮಾನಪತ್ರ ವಾಚಿಸಿದರು.

LEAVE A REPLY

Please enter your comment!
Please enter your name here