ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಸುಣ್ಣಾರಿಯ ಎಕ್ಸಲೆಂಟ್ ಪ.ಪೂ. ಕಾಲೇಜಿನಲ್ಲಿ ಪ.ಪೂ. ಶಿಕ್ಷಣ ಇಲಾಖೆ, ಸುಣ್ಣಾರಿ ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಹಾಗೂ ಎಕ್ಸಲೆಂಟ್ ಪ.ಪೂ. ಕಾಲೇಜಿನ ಆಶ್ರಯದಲ್ಲಿ 3 ದಿನಗಳ ಕಾಲ ಆಯೋಜನೆಗೊಂಡು, ಶನಿವಾರ ಮುಕ್ತಾಯಗೊಂಡ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕ-ಬಾಲಕಿಯರ ಎರಡೂ ವಿಭಾಗಗಳಲ್ಲೂ ಉಡುಪಿ ತಂಡವನ್ನು ಫೈನಲ್‌ನಲ್ಲಿ ಸೋಲಿಸಿದ ದ.ಕ. ತಂಡವು ಪ್ರಶಸ್ತಿಯನ್ನು ಗೆದ್ದುಕೊಂಡಿತು.
Video:
೩೩ ತಂಡಗಳಿದ್ದ ಬಾಲಕರ ವಿಭಾಗದ ಫೈನಲ್‌ನಲ್ಲಿ ದ.ಕ. ತಂಡವು ಉಡುಪಿ ಎದುರು ೨೫-೨೩, ೨೫-೧೨ ಹಾಗೂ ೨೫-೧೮ ಅಂತರದಿಂದ, ಬಾಲಕಿಯರ ವಿಭಾಗದಲ್ಲಿ ೩೨ ದ.ಕ. ತಂಡವು ಉಡುಪಿ ವಿರುದ್ಧ ೨೫-೧೯, ೨೫-೨೧, ೨೫-೧೫ ಅಂತರದಿಂದ ಗೆದ್ದು ಜಯಶಾಲಿಯಾಯಿತು.
ಸಮಾರೋಪ ಸಮಾರಂಭದಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಸ್ಥಾನ ಪಡೆದ ತಂಡಗಳಿಗೆ ಟ್ರೋಫಿ ವಿತರಿಸಲಾಯಿತು. ಪ್ರಥಮ, ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಆಕರ್ಷಕ ಟ್ರೋಪಿ, ಪ್ರಮಾಣಪತ್ರ, ಪದಕ ನೀಡಲಾಯಿತು.
ಉಡುಪಿ ಪ.ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ ಅಧ್ಯಕ್ಷತೆ ವಹಿಸಿದ್ದರು.
ಉದ್ಯಮಿಗಳಾದ ಗೋವಿಂದ ಬಾಬು ಪೂಜಾರಿ, ಎಂ.ಎಂ.ಹೆಗ್ಡೆ ಎಜುಕೇಶನ್ ಎಂಡ್ ಚಾರಿಟೇಬಲ್ ಟ್ರಸ್ಟ್ ಅದ್ಯಕ್ಷರಾದ ಎಂ. ಮಹೇಶ್ ಹೆಗ್ಡೆ, ಜಯರತ್ನ ಚಾರಿಟೆಬಲ್ ಟ್ರಸ್ಟ್ ಅದ್ಯಕ್ಷ ಎಂ. ದಿನೇಶ್ ಹೆಗ್ಡೆ, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಪಂದ್ಯಾಟದ ರಾಜ್ಯ ವೀಕ್ಷಕರಾದ ಮಹಾಂತೇಶ, ಡಾ. ಗೋವಿಂದ, ಕ್ರೀಡಾ ಸಂಯೋಜಕ ದಿನೇಶ್ ಕುಮಾರ್, ಮಂಗಳೂರು ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ, ಕುಂದಾಪುರ ಪ.ಪೂ. ಕಾಲೇಜು ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ, ವಿವೇಕೋದಯ ಶಿಕ್ಷಣ ಸಂಸ್ಥೆ ಮುಖ್ಯೋಪಾಧ್ಯಾಯ ರಘುರಾಮ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಅರುಣ್ ಪ್ರಕಾಶ್ ಹೆಗ್ಡೆ, ಗುತ್ತಿಗೆದಾರ ಅನಿಲ್ ಕುಮಾರ್ ಶೆಟ್ಟಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್ ಕುಮಾರ್, ಜಯಲತಾ, ಗ್ರಾ.ಪಂ. ಸದಸ್ಯರಾದ ಗಣೇಶ್ ಶೆಟ್ಟಿ, ವಿಠಲ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡೆನ್ನಿಸ್ ಸಿಕ್ವೇರಾ, ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಕಾನೆ ನಿರ್ದೇಶಕ ಬಲಾಡಿ ಸಂತೋಷ್ ಕುಮಾರ್ ಶೆಟ್ಟಿ, ಶೇಖರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಎಕ್ಸಲೆಂಟ್ ಪ.ಪೂ. ಕಾಲೇಜು ಪ್ರಾಂಶುಪಾಲ ಡಾ| ರಮೇಶ ಶೆಟ್ಟಿ ಪ್ರಸ್ತಾವಿಸಿದರು. ಸುಜ್ಞಾನ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ ಸ್ವಾಗತಿಸಿ, ಕೋಶಾಧಿಕಾರಿ ಭರತ್ ಶೆಟ್ಟಿ ವಂದಿಸಿದರು. ಶಿಕ್ಷಕ ಸತೀಶ್ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು.