ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿ ಓಣಂ ಹಬ್ಬವನ್ನು ಕಾಲೇಜಿನ ಐಕ್ಯೂಎಸಿ ಘಟಕ ಹಾಗೂ ಹಿಂದಿ ವಿಭಾಗದ ಆಯೋಜನೆಯಲ್ಲಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ ಉಮೇಶ್ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಓಣಂ ಆಚರಣೆಗೆ ಶುಭ ಹಾರೈಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಘಟಕದ ಸಂಯೋಜಕಿ ಅವಿತಾ ಕೋರಿಯಾ, ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ದೀಪಾ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ವೃಂದ ಉಪಸ್ಥಿತರಿದ್ದರು.