ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕಾಳಾವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಡಿ.12ರಂದು ವಾರ್ಷಿಕ ಕ್ರೀಡಾಕೂಟ ಜರುಗಿತು. ಕಾಳಾವರ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಶೆಟ್ಟಿಯವರು ಪಥಸಂಚಲನಕ್ಕೆ ಹಸಿರು ನಿಶಾನೆ ನೀಡಿದರು.
ಎಸ್ ಡಿ ಎಂ ಸಿ ಅಧ್ಯಕ್ಷರಾದ ನಿತ್ಯಾನಂದ ದೇವಾಡಿಗ ಗೌರವ ರಕ್ಷೆ ಸ್ವೀಕರಿಸಿ ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಕ್ರೀಡಾ ಮಂತ್ರಿ ದೀಕ್ಷಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗರವರು ಸ್ವಾಗತಿಸಿದರು. ದೈಹಿಕ ಶಿಕ್ಷಕ ಅರುಣ್ ಕುಮಾರ್ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕ ರವಿರಾಜ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.
ಕ್ರೀಡಾ ಕೂಟದಲ್ಲಿ ಸುಧಾಕರ ಶೆಟ್ಟಿ, ಬೇಳೂರು ಬಾಲಕೃಷ್ಣ ಶೆಟ್ಟಿ, ಕಾಳಾವರ, ಜಯಪ್ರಕಾಶ್ ಶೆಟ್ಟಿಯವರು ತೀರ್ಮಾನಕಾರರಾಗಿ ಸಹಕರಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ವಿಜಯದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.