ಕುಂದಾಪುರ :ಡಿ.17 ರಂದು ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಸಂಸ್ಥಾಪಕ ದಿನಾಚರಣೆ ವಿಕಾಸ-2022

0
227

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಸಂಸ್ಥಾಪಕ ದಿನಾಚರಣೆ ವಿಕಾಸ-2022 ಡಿ.17 ಶನಿವಾರ ಬೆಳಿಗ್ಗೆ 10 ಗಂಟೆಗೆ ಕೋಡಿಯ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ. ಅಬ್ದುಲ್ ರೆಹಮಾನ್ ಬ್ಯಾರಿ ಹೇಳಿದರು.

ಅವರು ಕುಂದಾಪುರ ಪ್ರೆಸ್‍ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಕರಾವಳಿ ಕಾವಲು ಪಡೆ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಮತ್ತು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗಣಕ ಯಂತ್ರದಲ್ಲಿ ಭಾರತೀಯ ಭಾಷೆಗಳ ತಂತ್ರಾಂಶವನ್ನು ಪರಿಚಯಿಸಿದ ನಿವೃತ್ತ ಪ್ರಾದ್ಯಾಪಕರಾದ ವಿಜ್ಞಾನಿ ನಾಡೋಜ ಕೆ.ಪಿ ರಾವ್ ಇವರು ಮತ್ತು ಅಂತರಾಷ್ಟ್ರೀಯ ಕ್ರಿಕೇಟರ್ ಪೃಥ್ವಿರಾಜ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದರು.

Click Here

ಆಂಗ್ಲ ಭಾಷಾ ಉಪನ್ಯಾಸಕ ಡಾ.ಹಯವದನ ಉಪಾಧ್ಯ ಮಾತನಾಡಿ 1906ರಲ್ಲಿ ಕೋಡಿಯಲ್ಲಿ ಹುಲ್ಲಿನಹೊದಿಕೆಯಿಂದ ಕೂಡಿದ ಚಪ್ಪರದಡಿಯಲ್ಲಿ ಆರಂಭವಾದ ಸಂಸ್ಥೆಗೆ ಈಗ 116 ವರ್ಷ. ದಿ. ಹಾಜಿ ಮಾಸ್ಟರ್ ಮಹಮೂದ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಅಂಗಸಂಸ್ಥೆಗಳು ಊರ ಪರವೂರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದಾರಿಯಾಯಿತು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಪದವಿ, ಡಿಎಡ್, ಬಿಎಡ್ ವಿಭಾಗಗಳಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಜಾತಿಮತ ಬೇಧವಿಲ್ಲದೆ ವ್ಯಾಸಂಗ ಮಾಡುತ್ತಿದ್ದಾರೆ ಎಂದರು.

ಪ್ರಸ್ತುತ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬ್ದುಲ್ ರಹಿಮಾನ್ ಅವರ ನೇತೃತ್ವದಲ್ಲಿ ಸಯ್ಯದ್ ಮೊಹಮ್ಮದ್ ಬ್ಯಾರಿ ಅವರ ಮಾರ್ಗದರ್ಶನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಅತ್ಯುತ್ತಮವಾದ ಸಾಧನೆಗಳನ್ನು ಮಾಡುತ್ತಾ ಬಂದಿದೆ. ಪ್ರತೀ ವರ್ಷ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಡಿಎಡ್ ಕಾಲೇಜಿನ ಮುಖ್ಯಸ್ಥೆ ಪಿರ್ದೋಸ್ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here