ಕುಂದಾಪುರ ಮಿರರ್ ಸುದ್ದಿ…
ಕೋಟ: ಡಾ. ಕೋಟ ಶಿವರಾಮ ಕಾರಂತ ಮನೆತನ ಶ್ರೀ ಶಾಂಭವೀ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ವಿದ್ಯಾರ್ಥಿಗಳ ಕಲಿಕಾ ಹಿತದೃಷ್ಠಿಯಿಂದ ಶಾಲೆಯ ಹಳೆ ವಿದ್ಯಾರ್ಥಿ ಕಾಸನಗುಂದು ಮಹೇಶ್ ಹಾಗೂ ಪ್ರಶಾಂತ್ ಮಯ್ಯ ಇವರು ಎರಡು ಲಾಪ್ ಟಾಪ್ ಹಾಗೂ ಶಾಲಾಭಿವೃದ್ಧಿ ನಿಧಿಗೆ ದೇಣಿಗೆಯನ್ನು ನೀಡಿದರು.ಇದನ್ನು ಬುಧವಾರ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ರಾಜಾರಾಮ್ ಐತಾಳ್ ಇವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಯ್ಯ ಕುಟುಂಬದ ಯಜ್ಞನಾರಾಯಣ ಮಯ್ಯ ಕಾಸನಗುಂದು, ಶಾಲಾ ಮುಖ್ಯ ಶಿಕ್ಷಕ ದಿವಾಕರ್ ರಾವ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಜೋಗಿ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.