ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮಹತ್ವದ ಸ್ಥಾನವನ್ನು ಪಡೆದಿದ್ದು, ಅತೀ ಕಡಿಮೆ ಅವಧಿಯಲ್ಲಿ ಅತ್ಯುತ್ತಮ ಸಾಂಸ್ಕøತಿಕ ಕಾರ್ಯಕ್ರಮ ನೀಡಿ ಪ್ರೇಕ್ಷಕರನ್ನು ಮನರಂಜಿಸುವ ಈ ಕಾರ್ಯ ನಿಜವಾಗಿಯೂ ವಿದ್ಯಾರ್ಥಿ ಬದುಕಿಗೆ ಅಗತ್ಯ ಎಂದು ನಾವುಂದದ ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರಕೋಡು ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಶುಭ ಹಾರೈಸಿದರು. ಮುಖ್ಯ ಅತಿಥಿ ನೆಲೆಯಲ್ಲಿ ಉಪಸ್ಥಿತರಿದ್ದ ಅಣ್ಣಪ್ಪ ಶೆಟ್ಟಿ ಕಾಲ್ತೋಡು, ಗ್ರಾಮ ಪಂಚಾಯತ್ ಸದಸ್ಯೆ ರೇವತಿ ಶೆಟ್ಟಿ, ಜಯರಾಮ ಶೆಟ್ಟಿ, ಉದ್ಯಮಿಗಳು ಗಂಟಿಹೊಳೆ, ಚೆನ್ನಮ್ಮ ಪೂಜಾರಿ, ಮಾಜಿ ಅಧ್ಯಕ್ಷರು, ಎಸ್.ಡಿ.ಎಮ್.ಸಿ., ಸ.ಹಿ. ಪ್ರಾ. ಶಾಲೆ, ಬವಳಾಡಿ, ವೆಂಕಟೇಶ್ ಹೆಬ್ಬಾರ್, ಪ್ರಗತಿಪರ ಕೃಷಿಕರು, ನಾಗರಾಜ ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಬಿಜೂರು, ಕಮಲಾ ಸಹ ಶಿಕ್ಷಕರು, ಸ.ಹಿ.ಪ್ರಾ. ಶಾಲೆ, ಬವಳಾಡಿ ಶುಭಹಾರೈಸಿದರು.
ಶಿಬಿರಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿ, ಮೇಘನಾ ಸ್ವಾಗತಿಸಿ, ಸುಚಿತ ಶೆಟ್ಟಿ ವಂದಿಸಿದರು. ಸಹ ಶಿಬಿರಾಧಿಕಾರಿ ದೀಪಾ ಪೂಜಾರಿ ನಿರೂಪಿಸಿದರು.